ಬೆಂಗಳೂರು : ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಪಡೆಯಲು ಕಾಲೇಜಿನ ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಶೇ. 50 ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇರಬೇಕೆಂಬ ನಿಯಮವನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ ಒದಗಿಸುವ ಪ್ರಸ್ತಾವನೆಗೆ ಸಮ್ಮತಿ ನೀಡಲಾಗಿದೆ.
ಕಾಲೇಜು ಆಡಳಿತ ಮಂಡಳಿಯಲ್ಲಿ 3ನೇ ಎರಡು ಭಾಗ ಅಲ್ಪಸಂಖ್ಯಾತರೇ ಸದಸ್ಯರಾಗಿರಬೇಕು ಎಂಬ ಷರತ್ತನ್ನು ಮುಂದುವರೆಸಲಾಗಿದೆ. ರಾಜ್ಯದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಬೌದ್ದ ಮತ್ತು ಪಾರ್ಸಿ ಸಮುದಾಯಗಳ ಜನಸಂಖ್ಯೆ ಪ್ರಮಾಣ ತುಂಬಾ ಕಡಿಮೆ ಇದೆ.ಹೀಗಾಗಿ ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳಲ್ಲ ಶೇ.50 ರಷ್ಟು ಅಲ್ಪಸಂಖ್ಯಾತರು ಪ್ರವೇಶ ಪಡೆಯುವುದು ಕಷ್ಟ. ಈ ಕಾರಣಕ್ಕಾಗಿ ಈ ನಿಯಮ ಕೈಬಿಡಲಾಗಿದೆ ಎನ್ನಲಾಗಿದೆ.