ಕೋಲಾರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ಸರಿಯಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿರುವುದು ಸರಿಯಾಗಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಈ ಬಗ್ಗೆ ಬೇರೆ ಏನನ್ನೂ ಕೇಳಬೇಡಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಅವರ ಅಧಿಕಾರ ಹಂಚಿಕೆ ಒಪ್ಪಂದದ ಹೇಳಿಕೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಯಾವುದೇ ಒಪ್ಪಂದವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.