ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಪ್ಪ ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ನೊಂದು ವಿಷ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ವಿಕಾಸ್.ಆರ್ (20) ಆತ್ಮಹತ್ಯೆಗೆ ಶರಣಾಗಿರುವ ಯುವಕ. ವಿಕಾಸ್ ತನಗೆ ಬೈಕ್ ಕೊಡಿಸುವಂತೆ ತಂದೆಗೆ ಬೈಕ್ ಕೇಳುತ್ತಿದ್ದ. ಆದರೆ ತಂದೆ ಹಣದ ಸಮಸ್ಯೆಯಿಂದ ಮಗನಿಗೆ ಬೈಕ್ ಕೊಡಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಮಾನಸಿಕವಾಗಿ ನೊಂದ ಯುವಕ ಮನೆ ಬಿಟ್ಟು ಹೋಗಿದ್ದ ಎನ್ನಲಾಗಿದೆ.
ಇದೀಗ ವಿಕಾಸ್ ಸಂಬಂಧಿಕರ ಮನೆಯಲ್ಲಿ ವಿಷ ಸೇವಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ನ್ಯಾಮತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.