ಬಳ್ಳಾರಿ : ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನ್ನು ಸರ್ಕಾರ ಇದೀಗ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಈ ಒಂದು ಪ್ರಕರಣಕ್ಕೆ ಲೋಕಾಯುಕ್ತ ಎಂಟ್ರಿ ಆಗಿದೆ. ಇದೀಗ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ಮಾಡಿ, ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದೆ.
ಬಾಣಂತಿಯರ ಸಾವಿನ ತನಿಖೆಗೆ ಇಳಿದ ಲೋಕಾಯುಕ್ತ ಇಂದು ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ತಂಡದವರು ಇದೀಗ ಭೇಟಿ ನೀಡಿದ್ದಾರೆ. ಸರಣಿ ಸಾವಿನ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದುವರೆಗೂ ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಸೇರಿ ಇದುವರೆಗೆ ಬಳ್ಳಾರಿಯಲ್ಲಿ 6 ಬಾಣಂತಿಯರು ಸಾವನ್ನಪ್ಪಿದ್ದು, ಸಾರ್ವಜನಿಕರು ಆಸ್ಪತ್ರೆಗಳ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಒಂದು ಪ್ರಕರಣ ತನಿಖೆಯ ಹಂತದಲ್ಲಿ ಇರುವಾಗಲೇ ನಿನ್ನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಮಯ್ಯ ಎಂಬ ಬಾಣಂತಿ ಮಹಿಳೆ ಸಾವನ್ನಪ್ಪಿದ್ದಾರೆ.
ಬಾಣಂತಿಯರ ಸಾವಿಗೆ ಗ್ಲುಕೋಸ್ ಸಹಿತ ‘IV ಗ್ಲೋಕೋಸ್’ ಕಾರಣ!
ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇಡೀ ಅನಾಹುತಕ್ಕೆ ಗ್ಲುಕೋಸ್ ಸಹಿತ ಇಂಟ್ರಾವೀನಸ್ ದ್ರಾವಣ ಕಾರಣ ಅನ್ನೋ ವರದಿ ಬಹಿರಂಗವಾಗಿದೆ. ಸೇರಿಯನ್ ವೇಳೆ ನೀಡಿದ್ದ “IV ಗ್ಲುಕೋಸ್”ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.
‘IV ಗ್ಲುಕೋಸ್’ ಬಳಸದಂತೆ ಆರೋಗ್ಯ ಇಲಾಖೆ ಸೂಚನೆ
ಐವಿ ಕಳಪೆ ಗುಣಮಟ್ಟದಿಂದ ಕೂಡಿದೆ. ಆದರೂ, ಕೂಡ ವೈದ್ಯರು ಸಿಸೇರಿಯನ್ ವೇಳೆ “IV ಗ್ಲುಕೋಸ್” ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. ಹೀಗಾಗಿ, IV ಗ್ಲುಕೋಸ್ ಬಳಕೆ ಮಾಡದಂತೆ ಆರೋಗ್ಯ ಇಲಾಖೆ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.