ನವದೆಹಲಿ : ಇತ್ತೀಚಿಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಿಪಿ ಯೋಗೇಶ್ವರ್ ಅವರ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೀನಾಯವಾಗಿ ಸೋತಿದ್ದರು. ಇದರ ಬೆನ್ನಲ್ಲೆ, ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗುತ್ತದೆ ಎಂಬುದರ ಕುರಿತು, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಈ ಕುರಿತು ಸುಳಿವು ನೀಡಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಇನ್ನು ಮುಂದೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಇದೀಗ ಸುಳಿವು ನೀಡಿದ್ದಾರೆ ಎಂದು ತಿಳಿದುಬಂದಿದೆ.








