ಬೆಂಗಳೂರು : ಅಧಿಕಾರ ಹಂಚಿಕೆಯ ಕುರಿತಂತೆ ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮಲ್ಲಿ ಯಾವುದೇ ರೀತಿಯ ಪವರ್ ಶೇರಿಂಗ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಅಧಿಕಾರದ ಹಂಚಿಕೆ ಇಲ್ಲ. ರಾಜಕೀಯ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇನೆ. ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ನಾನು ಏನು ಇಲ್ಲ, ಎಲ್ಲೂ ಮಾತನಾಡಿಲ್ಲ. ನಮ್ಮಲ್ಲಿ ಯಾವುದೇ ರೀತಿಯ ಪವರ್ ಶೇರಿಂಗ್ ಇಲ್ಲ ಎಂದು ಸ್ಪಷ್ಟನೆ ನೀಡಿದರು.