ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಅಲ್ಲದೆ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಸದ್ಯಕ್ಕೆ ಬದಲಾವಣೆ ಮಾಡಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದರು.
ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಸದ್ಯ ವಿಜಯೇಂದ್ರ ಸರಿ ಅನಿಸಿದ್ದಾರೆ. ಹೀಗಾಗಿ ಅವರಿಗೆ ನಾಯಕತ್ವ ನೀಡಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜೇಂದ್ರ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ನಾಯಕತ್ವ ಬದಲಾಯಿಸುವ ಅಧಿಕಾರ ಇಬ್ಬರಿಗೆ ಮಾತ್ರ ಇದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಇನ್ನೊಂದು ಹೈಕಮಾಂಡ್ ಅವರಿಗೆ ನೇಮಕ ಮಾಡೋದು. ಬದಲಾಯಿಸುವುದು ಇಬ್ಬರು ಮಾತ್ರ.ಯಾರೋ ಹೇಳಿದರು ಅಂತ ಪಕ್ಷದ ನಾಯಕತ್ವ ಬದಲಿಸಲ್ಲ. ಯಾವಾಗ ಸರಿ ಅನಿಸುತ್ತೋ ಅವಾಗ ನಿರ್ಧಾರ ಕೈಗೊಳ್ಳುತ್ತೇವೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಆದರೆ ಶೋಕಾಸ್ ನೋಟಿಸ್ ಗೆ ಯತ್ನಾಳ್ ಇದುವರೆಗೂ ಉತ್ತರ ನೀಡಿಲ್ಲ ಎಂದು ತಿಳಿಸಿದರು.
ಕಳೆದ ಹಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಬಲಿಗರ ನಡುವೆ ಬಡ ಬಡಿದಾಟ ನಡೆದಿತ್ತು ಈ ವಿಚಾರವಾಗಿ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿ ಉತ್ತರಿಸುವಂತೆ ಸೂಚನೆ ನೀಡಿತ್ತು ಆದರೆ ಶಾಸಕ ಯತ್ನಾಳ್ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ ಎಂದು ತಿಳಿಸಿದರು.