ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಓಡಾಟದಲ್ಲಿ ದಾಖಲೆ ನಿರ್ಮಿಸಿದ್ದು, ಒಂದೇ ದಿನ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಭಾರೀ ಏರಿಕೆ ಕಂಡಿದ್ದು, ಗರಿಷ್ಠ ಪ್ರಮಾಣ ತಲುಪಿದೆ.
ಈ ವಿಷಯದ ಕುರಿತಾಗಿ ಬಿಎಂಆರ್‌ಸಿಎಲ್ ಮಾಹಿತಿಯನ್ನು ಹಂಚಿಕೊಂಡಿದ್ದು, ನಮ್ಮ ಮೆಟ್ರೋ’ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಡಿ. 6 ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬಿಎಂಆರ್‌ಸಿಎಲ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.
ನೇರಳೆ ಮಾರ್ಗದಲ್ಲಿ 4,39,616 ಜನ ಪ್ರಯಾಣಿಸಿದ್ದು, ಹಸಿರು ಮಾರ್ಗದಲ್ಲಿ 3,12,248 ಜನ ಪ್ರಯಾಣಿಸಿದ್ದಾರೆ. ಕೆಂಪೇಗೌಡ ನಿಲ್ದಾಣದಿಂದ ಮಾರ್ಗ ಬದಲಿಸುವ ಮೂಲಕ 1,67,617 ಜನ ಪ್ರಯಾಣಿಸಿದ್ದಾರೆ.ಕಳೆದ ಆಗಸ್ಟ್ 14ರಂದು ನಮ್ಮ ಮೆಟ್ರೋದಲ್ಲಿ ಒಂದೇ ದಿನ ಬರೋಬ್ಬರಿ 9.17 ಲಕ್ಷ ಮಂದಿ ಸಂಚರಿಸುವ ಮೂಲಕ ದಾಖಲೆ ಸೃಷ್ಟಿಸಿತ್ತು. ಇದೀಗ ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಅಧಿಕ ಜನ ಪ್ರಯಾಣಿಸುವ ದಾಖಲೆಯನ್ನು ಮುರಿದಿದೆ.
ನಮ್ಮ ಮೆಟ್ರೋ' ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ.!
ಡಿ. 6 ರಂದು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. pic.twitter.com/iIyU7H41CP— ನಮ್ಮ ಮೆಟ್ರೋ (@OfficialBMRCL) December 7, 2024








