ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ 2024 ನೇ ಮಾರ್ಚ್ 12 ರಂದು ಹೊರಡಿಸಿದ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ತಾಂತ್ರಿಕ ಕಾರಣಗಳಿಂದ ಅರ್ಜಿಗಳನ್ನು ಸ್ವೀಕರಿಸಲು ಸಾಧ್ಯವಾಗಿರುವುದಿಲ್ಲ. ಆದುದರಿಂದ ಸದರಿ ಅಧಿಸೂಚನೆಯಲ್ಲಿನ ಕಿರಿಯ ಸಹಾಯಕರ ಹುದ್ದೆಗಳಿಗೆ ಸಂಬಂಧಿಸಿದಂತೆ ನವೆಂಬರ್ 30 ರ ತಿದ್ದುಪಡಿ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟಿಸಲಾಗಿರುತ್ತದೆ.
ಈ ತಿದ್ದುಪಡಿ ಅಧಿಸೂಚನೆಯನ್ವಯ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್ ಮೂಲಕ http://kea.kar.nic.in ಅಥವಾ https://cetonline.karnataka.gov.in/kea ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 2025ನೇ ಜನವರಿ 3 ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ ಮೀಸಲಾತಿ ವರ್ಗಿಕರಣ, ವಿದ್ಯಾರ್ಹತೆ, ವಯೋಮಿತಿ, ಶುಲ್ಕ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ https://www.kla.kar.nic.in/council/Career.htm ಪ್ರಾಧಿಕಾರದ ವೆಬ್‍ಸೈಟ್ ಮೂಲಕ http://kea.kar.nic.in ಅಥವಾ https://cetonline.karnataka.gov.in/kea ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.