ಬೆಂಗಳೂರು: ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಡಿ.14ರಿಂದ 18ರವರೆಗೂ ರಾಜ್ಯದಲ್ಲಿ ಮಳೆಯಾಗುವ ಸಂಭವವಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಫೆಂಗಲ್ ಚಂಡಮಾರುತದ ಹಾನಿಯಿಂದ ಇದೀಗ ಸುಧಾರಿಸಿಕೊಳ್ಳುತ್ತಿರುವಾಗಲೇ ಮತ್ತೆರಡು ವಾಯುಭಾರ ಕುಸಿತ ಸೃಷ್ಟಿಯಾಗುವ ಲಕ್ಷಣ ಬಂಗಾಳಕೊಲ್ಲಿ ಸಾಗರ ದಲ್ಲಿ ಕಂಡು ಬರುತ್ತಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿಡಿ.14-15ಕ್ಕೆ ಮಳೆಯಾಗಲಿದೆ. 2ನೇ ವಾಯುಭಾರ ಕುಸಿತ ಡಿ.16ರ ಬಳಿಕ ರೂಪುಗೊಳ್ಳಲಿದ್ದು, ಇದರಿಂದ ಡಿ.17-18ಕ್ಕೆ ರಾಜ್ಯದಲ್ಲಿ ಮಳೆಯಾಗಲಿದೆ. ರಾಜ್ಯದಲ್ಲಿ ಬಹುತೇಕ ಬೆಳೆಗಳು ಕಟಾವಿಗೆ ಬಂದಿದ್ದು, ರೈತರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಹವಾಮಾನ ತಜ್ಞಶ್ರೀನಿವಾಸ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.