ಆಂಧ್ರಪ್ರದೇಶ: ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟವು( ಎ ಎಸ್ ಆರ್ ಟಿ ಯು) ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಯೋಗದಲ್ಲಿ ಡಿಸೆಂಬರ್ 6, 7 ಮತ್ತು 8 ರಂದು ವಿಶಾಖಪಟ್ಟಣಂನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕ್ರೀಡಾಪಟುಗಳು ಭಾಗವಹಿಸಿದ್ದು, 04 ಚಿನ್ನ, 06 ಬೆಳ್ಳಿ, 07 ಕಂಚು ಒಟ್ಟು 17 ಪದಕಗಳನ್ನು ಗೆಲ್ಲುವ ಮೂಲಕ 2024 ರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ್ನು ತನ್ನದಾಗಿಸಿಕೊಂಡಿದೆ.
ಈ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದೇಶದ 19 ರಾಜ್ಯಗಳ ರಸ್ತೆ ಸಾರಿಗೆ ನಿಗಮಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 41 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಇಂದು ಜರುಗಿದ ಅಥೆಟಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ, ಆಂಧ್ರಪ್ರದೇಶದ ಪೋಲಿಸ್ ಮಹಾ ನಿರ್ದೇಶಕರು ಹಾಗೂ ಉಪಾಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸಿ ಎಚ್ ದ್ವಾರಕಾ ತಿರುಮಲ ರಾವ್ ಐಪಿಎಸ್, APSRTC ಅಧ್ಯಕ್ಷರಾದ ಕೆ ನಾರಾಯಣ , ಕಾಂತಿಲಾಲ್ ದಂಡೆ ಐಎಎಸ್ , ಪ್ರಧಾನ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ಹಾಗೂ ಟಿ ಸೂರ್ಯ ಕಿರಣ್ ಅತಿಥಿಗಳಾಗಿ ಉಪಸ್ಥಿತರಿದ್ದರು ಹಾಗೂ ಆಂಧ್ರಪ್ರದೇಶದ ರಸ್ತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.