ನವದೆಹಲಿ : ದೆಹಲಿಯ 2 ಶಾಲೆಗಳಿಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಶಾಲೆಯ ವಿದ್ಯಾರ್ಥಿಗಳನ್ನು ಮನೆಗೆ ವಾಪಸ್ ಕಳುಹಿಸಲಾಗಿದೆ.
ದೆಹಲಿಯ ಎರಡು ಶಾಲೆಗಳಿಗೆ ಇಂದು ಬೆಳ್ಳಂಬೆಳಿಗ್ಗೆ ಬಾಂಬ್ ಬೆದರಿಕೆ ಬಂದಿದೆ. ಪಶ್ಚಿಮ ವಿಹಾರ್ನ ಡಿಪಿಎಸ್ ಆರ್ಕೆ ಪುರಂ ಮತ್ತು ಜಿಡಿ ಗೋಯೆಂಕಾ ಶಾಲೆಗೆ ಮುಂಜಾನೆ ಬೆದರಿಕೆ ಬಂದಿದೆ. ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಇಮೇಲ್ ಮೂಲಕ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ದೆಹಲಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.