ಬೆಳಗಾವಿ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದವರು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದೀಗ ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಪಂಚಮಸಾಲಿ ಸಮುದಾಯದ ಪ್ರಮುಖರು ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.ಆದರೆ ಸರ್ಕಾರ ಅವರಿಗೆ ಶಾಕ್ ನೀಡಿದ್ದು ಹೋರಾಟದ ವಾಹನ ಬೆಳಗಾವಿ ಪ್ರವೇಶಿಸಿದಂತೆ ನಿರ್ಬಂಧಿಸಲಾಗಿದೆ.
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ನೀಡಿದ ಸರ್ಕಾರ ಡಿಸೆಂಬರ್ 9, 10 ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿದೆ. 2 ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಸಲಾಗುತ್ತಿದ್ದು, ಹೋರಾಟಕ್ಕೆ ಬರೋ ಟ್ರ್ಯಾಕ್ಟರ್, ಕ್ರೂಜರ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸವ ಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರು ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಎನ್‌ಎಸ್ ಕಾಯ್ದೆಯ ಕಲಂ 163ರ ಅಡಿ ನಿಷೇಧಜ್ಞೆ ಜಾರಿ ಮಾಡಲಾಗಿದೆ.