ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಜೋಡಿ ಕೊಲೆ ನಡೆದಿದ್ದು, ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಜೋಡಿ ಕೊಲೆ ನಡೆದಿದೆ.
ವಿಕ್ರಂ (21) ಮತ್ತು ತೂರಿ (33) ಕೊಲೆಯಾದ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಯಲಹಂಕ ಬಳಿಯ ಬಯಲು ಬಸವೇಶ್ವರ ದೇವಸ್ಥಾನದ ಬಳಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ಇವರಿಬ್ಬರು ಸೆಕ್ಯೂರಿಟಿ ಗಾರ್ಡ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನೇಪಾಳ ಮತ್ತು ಬಿಹಾರ ಮೂಲದ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಡರಾತ್ರಿ ಪಾರ್ಟಿ ಮಾಡುವ ವೇಳೆ ಗಲಾಟೆಯಾಗಿ ಕೊಲೆ ಆಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.