ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 3 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಪರಾಜಿ ಗ್ರಾಮದಲ್ಲಿ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತೀರ್ಥಶ್ರೀ (9) ಎಂದು ಗುರುತಿಸಲಾಗಿದೆ.
3ನೇ ತರಗತಿ ಓದುತ್ತಿದ್ದ ಬಾಲಕಿ ಭಾನುವಾರ ನಿನ್ನೆ ರಜೆ ಇದ್ದರಿಂದ ಜೋಕಾಲಿ ಆಡಲು ಹೋಗಿದ್ದ ವೇಳೆ ಜೋಕಾಲಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿಕೊಂಡು ಬಾಲಕಿ ಮೃತಪಟ್ಟಿದ್ದಾಳೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.