ತುಮಕೂರು : ತುಮಕೂರಿನ ಸಿದ್ದಗಂಗಾ ಮಠದಲ್ಲಿ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಮಠದ ಸ್ಮೃತಿ ವನದ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಚಿರತೆ ಓಡಾಡಿರುವ ವಿಷಯ ತಿಳಿದು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಸಿದ್ದಗಂಗಾ ಮಠದ ಸ್ಮೃತಿ ವನದ ಬಳಿ ಚರಿತೆ ಓಡಾಡಿದೆ ನಾಯಿಯನ್ನು ಬೇಟೆ ಆಡಲು ಚಿರತೆ ಬಂದಿತು ಎಂದು ಶಂಕೆ ವ್ಯಕ್ತವಾಗಿದೆ ಆದರೆ ಇದೇ ವೇಳೆ ಜೋರಾಗಿ ನಾಯಿ ಬೊಗಳಿದ್ದರಿಂದ ಅಲ್ಲಿಂದ ಚಿರತೆ ಓಡಿಹೋಗಿದೆ ಎನ್ನಲಾಗಿದೆ.
ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಮಠದ ಸಿಬ್ಬಂದಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಓಡಾಡಿದ ಸ್ಥಳ ಪರಿಶೀಲಿಸಿದ ನಂತರ ಸೆರೆಗೆ ಬೋನು ಅಳವಡಿಸಿದ್ದಾರೆ. ಆದಷ್ಟು ಬೇಗ ಚಿರತೆಯನ್ನು ಸರಿ ಹಿಡಿಯಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.