ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಸನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಭಾರತ ಲಾಂಚನವನ್ನು ಅನಾವರಣಗೊಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ‘ಗಾಂಧಿ ಭಾರತ’ ಲಾಂಚನವನ್ನು ಅನಾವರಣ ಮಾಡಿದರು. . ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ ಖಾದರ್, ಸಚಿವರಾದ H.K.ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.