ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರದ ಅನಾವರಣಗೊಳಿಸಿದರು.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಎಂದು ಕರೆಯಲಾಗಿದೆ. ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರವನ್ನು ಆಕರ್ಷಕವಾಗಿ ಚಿತ್ರಿಸಲಾಗಿದೆ.
ಈ ವೇಳೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನಸಭಾ ಪರಿಷತ್ ನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಚಲುವರಾಯ ಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.