ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಖನದಾಳ ಎಂಬ ಗ್ರಾಮದಲ್ಲಿ ನಡೆದಿದೆ.
ಎರಡು ಕುಟುಂಬಗಳ ನಡುವೆ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆಯಿತು. ಈ ವೇಳೆ ಎರಡು ಕುಟುಂಬದ ಸದಸ್ಯರು ಮಾರಕಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಒಂದು ಘಟನೆಯಲ್ಲಿ ಎರಡು ಕುಟುಂಬಗಳ ಸದಸ್ಯರ ಪೈಕಿ ಒಟ್ಟು 5 ಜನರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಮುಗಳಖೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಳುಗಳನ್ನ ರಂಗಪ್ಪ ನಾಯಿಕ, ಪ್ರಹ್ಲಾದ್ ನಾಯಿಕ, ಲಕ್ಷ್ಮೀ ಬಾಯಿ ನಾಯಿಕ, ಗುರುಸಿದ್ದಪ್ಪ ನಾಯಿಕ, ಸುಪ್ರೀತ ನಾಯಿಕ ಗಾಯಗೊಂಡ ಗಾಯಾಳುಗಳು.ತಕ್ಷಣ ಎಲ್ಲರನ್ನು ಮುಗಳಖೋಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳುಗಳನ್ನು ಚಿಕಿತ್ಸೆ ಕೊಡಿಸಲಾಗಿದೆ. ಗೋಪಾಲ ನಾಯಿಕ, ಸುರೇಶ ನಾಯಿಕ ಎಂಬವರು ಹಲ್ಲೆ ನಡೆಸಿರುವ ಆರೋಪಗಳು ಕೇಳಿ ಬಂದಿವೆ.