ಬೆಳಗಾವಿ: ನಮ್ಮ ಸರ್ಕಾರ ಉತ್ತರ ಕರ್ನಾಟಕ ಹಾಗೂ ಸಮಗ್ರ ಕರ್ನಾಟಕದ ರೈತರ ಅಭಿವೃದ್ಧಿಗೆ ಬದ್ಧವಾಗಿದೆ. ನೀರಾವರಿ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬದ್ಧವಾಗಿದೆ. ವಿರೋಧ ಪಕ್ಷಗಳು ಸುಗಮ ಕಲಾಪ ನಡೆಸಲು ಅವಕಾಶ ಮಾಡಿಕೊಡಬೇಕು. ಯಾವುದೇ ರಾಜಕೀಯ ಮಾಡದೆ ಕಲಾಪದಲ್ಲಿ ಭಾಗವಹಿಸಿ ಸರ್ಕಾರದಿಂದ ಉತ್ತರವನ್ನು ಪಡೆಯಬೇಕು. ಇದು ಬಿಟ್ಟು ಕಲಾಪದ ಸಮಯವನ್ನು ವ್ಯರ್ಥ ಮಾಡಬಾರದು ಎಂದು ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಮೌಲ್ಯಯುತ ಚರ್ಚೆಗೆ ಅವಕಾಶ ಮಾಡಿಕೊಡಬೇಕು. ಸರ್ಕಾರ ಎಲ್ಲದಕ್ಕೂ ಉತ್ತರ ನೀಡಲು ಸಿದ್ಧವಿದೆ ಎಂದು ಹೇಳಿದರು.
ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಬಗ್ಗೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ದಿನೇಶ್ ಗೂಳಿಗೌಡ, ಸರ್ಕಾರ ಈಗಾಗಲೇ ಇದಕ್ಕೆ ಸಮಿತಿಯನ್ನು ರಚನೆ ಮಾಡಿ 5 ದಿನದಲ್ಲಿ ವರದಿ ಕೊಡುವಂತೆ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಹ ಈ ನಿಟ್ಟಿನಲ್ಲಿ ಸೂಚಿಸಿದ್ದಾರೆ. ಯಾವುದೇ ವಿಷಯಕ್ಕೆ ಸಂಬಂಧಪಟ್ಟಿದ್ದಾದರೂ ಸಹ ನಮ್ಮ ಸರ್ಕಾರದ ಪ್ರತಿನಿಧಿಗಳು ಸದನದಲ್ಲಿ ಉತ್ತರ ನೀಡಲು ಸಿದ್ಧರಿದ್ದಾರೆ. ಹೀಗಾಗಿ ಪ್ರತಿಪಕ್ಷದವರು ಸದನ ನಡೆಯಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut