ಪುಣೆ: ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು. ಬೆಳಗಾವಿಯಲ್ಲಿನ ಮರಾಠಿಗರನ್ನು ತುಳಿಯುವ ಕೆಲಸ ಆಗುತ್ತಿದೆ. ಅಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂಬುದಾಗಿ ಮಹಾರಾಷ್ಟ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಆರೋಪಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಈ ಹಿಂದೆ ಬೆಳಗಾವಿಯಲ್ಲಿನ ಮರಾಠಿಗರ ಅಭಿವೃದ್ಧಿಗಾಗಿ ಹೆಚ್ಚುವರಿ ಅನುದಾನ ನೀಡುವುದಾಗಿ ಅಸಾಂವಿಧಾನಿಕ ಸಿಎಂ ಭರವಸೆ ನೀಡಿದ್ದರು. ಆದರೇ ಅದು ಆಗಲೇ ಇಲ್ಲ ಎಂಬುದಾಗಿ ಕಿಡಿಕಾರಿದರು.
ಬೆಳಗಾವಿಯಲ್ಲಿ ಮರಾಠಿಗರ ಸ್ಥಿತಿ ಚಿಂತಾಜನಕವಾಗಿದೆ. ಕರ್ನಾಟಕ ಸರ್ಕಾರ ಬೆಳಗಾವಿಗೆ ಮಹಾರಾಷ್ಟ್ರ ನಾಯಕರ ಪ್ರವೇಶವನ್ನು ನಿರ್ಬಂಧಿಸಿದೆ. ಇದು ಸರಿಯಲ್ಲ ಎಂಬುದಾಗಿ ಹೇಳಿದರು.
ಬೆಳಗಾವಿಯಲ್ಲಿನ ಮರಾಠಿಗರ ಅಭಿವೃದ್ಧಿಯಾಗಬೇಕು ಅಂದ್ರೆ ಕೇಂದ್ರಾಡಳಿತ ಪ್ರದೇಶ ಆಗಬೇಕು ಎಂಬುದಾಗಿ ಒತ್ತಾಯಿಸಿದರು.