ಬೆಂಗಳೂರು: : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆ ವತಿಯಿಂದ ದಿನಾಂಕ: 01-01-2025 ರಿಂದ 6 ತಿಂಗಳ ಅವಧಿಯ “ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ತರಬೇತಿ ಪಡೆಯಲು ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಆಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು.
ಅರ್ಜಿಗಳನ್ನು ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಮರ, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್್, ಗ ಳಲ್ಲಿ ಹಾಗೂ ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ ಮಹಡಿ, 3ನೇ ಮುಖ್ಯರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ, ಮಕ್ಕಳಕೂಟ ಹತ್ತಿರ, ಚಾಮರಾಜಪೇಟೆ, ಬೆಂಗಳೂರು- 560018 ಇಲ್ಲಿ ಪಡೆದು ಭರ್ತಿ ಮಾಡಿದ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 31ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ಅಥವಾ ದೂರವಾಣಿ ಸಂಖ್ಯೆ : 080-2660 2046, 35541407 ಮೊಬೈಲ್ ಸಂಖ್ಯೆ : 9449007661, 9036259781 ಗೆ ಸಂರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut