ಬೆಳಗಾವಿ : ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಾಟಗಾರರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ರಾಜ್ಯ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯಥಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.