ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ಇನ್ನು ಹುಟ್ಟೂರು ಸೋಮನಹಳ್ಳಿಯಲ್ಲಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ನೀರವಮೌನ ಆವರಿಸಿದ್ದು, ಕುಟುಂಬಸ್ಥರು, ಅಭಿಮಾನಿಗಳು ಅವರು ನಡೆದು ಬಂದ ಹಾದಿ ನೆನೆಸಿಕೊಂಡು ಕಣ್ಣೀರು ಹಾಕುತ್ತಿದ್ದಾರೆ.