ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಎಸ್.ಎಂ.ಕೃಷ್ಣ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು ಮತ್ತು ಆತ್ಮೀಯ ಗೆಳೆಯರಾದ ಎಸ್.ಎಂ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಕೃಷ್ಣ. ಒಬ್ಬ ನಿಜವಾದ ರಾಜಕಾರಣಿ ಮತ್ತು ಧೀಮಂತ, ನಮ್ಮ ದೇಶ ಮತ್ತು ಕರ್ನಾಟಕಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳು ಎಂದೆಂದಿಗೂ ಸ್ಮರಣೀಯ. ನಾನು ಆಳವಾದ ವೈಯಕ್ತಿಕ ನಷ್ಟದ ಭಾವನೆಯನ್ನು ಅನುಭವಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಹೇಳಿದ್ದಾರೆ.
Deeply saddened by the passing of veteran leader, former Chief and Union Minister, and dear friend, Shri S.M. Krishna. A true statesman and stalwart, his invaluable contributions to our nation and Karnataka will forever be remembered. I feel a sense of deep personal loss. My…
— B.S.Yediyurappa (@BSYBJP) December 10, 2024
ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.