ಬೆಳಗಾವಿ :ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗದ ಸಭೆ ಮುಂದೂಡಿಕೆ ಮಾಡಲಾಗಿದೆ.
ಬೆಳಗಾವಿಯ ಶೂನ್ಯ ರೆಸಾರ್ಟ್ನಲ್ಲಿ ಇಂದು ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಔತಣಕೂಟವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.