ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣ್ಣೀರು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುವಾಗ ಮಲ್ಲಿಕಾರ್ಜುನ್ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಅವರ ನಿಧನ ನನಗೆ ಆಘಾತ ತಂದಿದೆ. ಅವರು ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.