ಬೆಂಗಳೂರು: ಹೃದಯಾಘಾತದಿಂದ ದಿಢೀರ್ ನಿಧನರಾದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು, ಇಂದು ಸಂಜೆ 5.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಬಗ್ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ ಎಸ್ಎಂ ಕೃಷ್ಣ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ಈ ದಿನ ಸಂಜೆ 5:30ಕ್ಕೆ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಭವನದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಸರ್ಕಾರದ ಸಂಪುಟ ಸಚಿವರು, ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕರು ಸಂಸದರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಳೆ ಎಸ್.ಎಂ ಕೃಷ್ಣ ಅಂತ್ಯಕ್ರಿಯೆಗೆ ಸಿಎಂ ಸೇರಿ ಎಲ್ಲಾ ಸಚಿವರು ಭಾಗಿ: ಡಿಸಿಎಂ ಡಿ.ಕೆ ಶಿವಕುಮಾರ್
ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography