ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡುಗಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ ಎಂದಿದ್ದಾರೆ.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ.
ಪಂಚಮಸಾಲಿ ಸಮುದಾಯದ…
— Siddaramaiah (@siddaramaiah) December 10, 2024
ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography