ಬೆಂಗಳೂರು: ಹೃದಯಾಘಾತದಿಂದ ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಇಂತಹ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಷ್ಟ್ರದ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾದ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಕಳೆದ ಅರವತ್ತು ವರ್ಷಗಳ ಕಾಲ ನಾಡಿನ, ರಾಷ್ಟ್ರದ ಸೇವೆಗೈದ ಕೃಷ್ಣ ರವರು ತಾವು ನಿರ್ವಹಿಸಿದ ಪ್ರತಿ ಹುದ್ದೆಯಲ್ಲೂ ಹೆಜ್ಜೆಗುರುತು ಮೂಡಿಸಿದವರು ಶ್ರೀ ಎಸ್.ಎಂ. ಕೃಷ್ಣ ಅವರು. ಇವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ.
1999 ರಿಂದ 2004 ಕೃಷ್ಣ ರವರು ಮುಖ್ಯಮಂತ್ರಿ ಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಕಾಲಘಟ್ಟದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಯೋಜನೆಗಳು ಇಂದಿಗೂ ಜಾರಿಯಲ್ಲಿದ್ದು ಅದು ಕೃಷ್ಣ ರವರ ದೂರದೃಷ್ಟಿಯ ಫಲವಾದದ್ದು. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ ಯೋಜನೆ ಸಮಾಜದ ಸರ್ವ ಜನರನ್ನು ಸ್ಪರ್ಶಿಸಿ ಜನಮನ ಗೆದ್ದ ಯೋಜನೆಗಳಾಗಿದ್ದವು ಎಂದು ಹೇಳಿದ್ದಾರೆ.
ಐಟಿ ಬಿಟಿ ಕ್ಷೇತ್ರಕ್ಕೆ ಆಗಾದವಾದ ಬೆಂಬಲ ನೀಡಿ ಬೆಂಗಳೂರು ನಗರದ ಬೆಳವಣಿಗೆಗೆ ಹಾಕಿಕೊಟ್ಟ ಭದ್ರ ಭೂನಾದಿಯಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರು ಸಿಲಿಕ್ಯಾನಾ ವ್ಯಾಲಿ ಎಂದು ಹೆಸರು ಗಳಿಸಿ ಅಮೇರಿಕಾದ ಕ್ಯಾಲಿಪೋರ್ನಿಯ ನಗರಕ್ಕೆ ಪರ್ಯಾಯವಾಗಿ ಹೆಸರು ಗಳಿಸಿತ್ತು. ಇಂದು ರಾಜ್ಯದ ಆಯವ್ಯಯ ಮೂರು ಲಕ್ಷ ಕೋಟಿ ದಾಟಿದ್ದರೆ ಅದಕ್ಕೆ ಕಾರಣ ಕೃಷ್ಣ ರವರು ಐಟಿ ಕ್ಷೇತ್ರಕ್ಕೆ ನೀಡಿದ ಅವಕಾಶಗಳೆ ಕಾರಣ. ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಹಲವು ಮೂಲಭೂತ ಸೌಕರ್ಯಗಳನ್ನು ನೀಡಿ ಕನ್ನಡ ನಾಡನ್ನು ವಿಶ್ವ ಭೂಪಟದಲಿ ಬೆಳಗಿಸಲು ಕೃಷ್ಣ ರವರ ಪಾತ್ರ ಅತ್ಯಂತ ಹಿರಿದಾದ್ದು ಎಂದು ತಿಳಿಸಿದ್ದಾರೆ.
ಶ್ರೀ ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬುದು ನಮ್ಮೆಲ್ಲರ ಒತ್ತಾಸೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
BREAKING: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ