ಮಂಡ್ಯ: ನಿನ್ನೆ ಅಕಾಲಿಕ ನಿಧನಕ್ಕೆ ಒಳಗಾದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಅಂತ್ಯ ಸಂಸ್ಕಾರಕ್ಕಾಗಿ ಹುಟ್ಟೂರು ಸೋಮನಹಳ್ಳಿಗೆ ಕೊಂಡೊಯ್ಯಲಾಗುತ್ತಿದೆ. ಇದೀಗ ಅಂತ್ಯಕ್ರಿಯೆ ಸ್ಥಳವಾದಂತ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪತ್ನಿ ಪ್ರೇಮ ಆಗಮಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ಧೂರು ತಾಲ್ಲೂಕಿನ ಸೋಮನಹಳ್ಳಿಯ ಕಾಫಿ ಡೇಯಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 3 ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಕುಟುಂಬಸ್ಥರು ನೆರವೇರಿಸಲಿದ್ದಾರೆ.
ಬೆಂಗಳೂರಿನ ಸದಾಶಿವನಗರದಿಂದ ಹೊರಡಿಸಿರುವಂತ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವು ರಾಮನಗರ ತಲುಪಿದೆ. ಅಲ್ಲಿ ಸಾರ್ವಜನಿಕರ ಅಂತಿಮ ದರ್ಶನದ ಬಳಿಕ, ಮದ್ದೂರಿನತ್ತ ಸಾಗುತ್ತಿದೆ. ಈ ವೇಳೆಯಲ್ಲಿ ಅಂತ್ಯ ಸಂಸ್ಕಾರದ ಸ್ಥಳವಾದಂತ ಸೋಮನಹಳ್ಳಿಗೆ ಎಸ್.ಎಂ ಕೃಷ್ಣ ಅವರ ಪತ್ನಿ ಪ್ರೇಮ ಆಗಮಿಸಿದ್ದಾರೆ.
ಇನ್ನೂ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ
BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿಗಳು ಸ್ಥಳದಲ್ಲೇ ದುರ್ಮರಣ
ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ
ರಾಜ್ಯ ಸರ್ಕಾರದಿಂದ ಸೇವೆಯಲ್ಲಿದ್ದಾಗ ಮರಣ ಹೊಂದಿದ ‘NPS ನೌಕರರ ಕುಟುಂಬ ಪಿಂಚಣಿ’ ಬಗ್ಗೆ ಮಹತ್ವದ ಆದೇಶ