ಮಂಡ್ಯ : ನಿನ್ನೆ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಹುಟ್ಟೂರು ಸೋಮನಹಳ್ಳಿಗೆ ಕೊಂಡೊಯ್ಯಲಾಗುತ್ತಿದ್ದು, ಜನ ಸಾಗರದ ನಡುವೆ ಈಗ ಎಸ್ ಎಂ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದತ್ತ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರ ಕೊಂಡೋಯ್ಯಲಾಗುತ್ತಿದೆ.
ಈಗಾಗಲೇ ಬೆಂಗಳೂರಿನಿಂದ ಹೊರಟು ರಾಮನಗರ, ಚನ್ನಪಟ್ಟಣದಲ್ಲಿ ಜನರು ಅಂತಿಮ ದರ್ಶನ ಪಡೆದರು. ಕೆಲವೇ ಕ್ಷಣಗಳಲ್ಲಿ ಮದ್ದೂರಿಗೆ ಪಾರ್ಥಿವ ಶರೀರ ಆಗಮನವಾಗಲಿದೆ. ದಾರಿ ಉದ್ದಕ್ಕೂ ಎಸ್ಎಮ್ ಕೃಷ್ಣ ಅವರ ಅವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿ ಕಂಬನಿ ಮಿಡಿದರು. ಮಧ್ಯಾಹ್ನದ ಹೊತ್ತಿಗೆ ಸ್ವಗ್ರಾಮ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ತಲುಪುತ್ತದೆ.
ಬಳಿಕ ಒಕ್ಕಲಿಗ ಸಂಪ್ರದಾಯದಂತೆ ಎಲ್ಲ ವಿಧಿ ವಿಧಾನಗಳ ಪ್ರಕಾರ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ, ಎಲ್ಲಾ ಸಚಿವರುಗಳು, ಶಾಸಕರು, ಗಣ್ಯರು ಹಾಗೂ ಎಸ್ಎಂ ಕೃಷ್ಣ ಅವರ ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.








