ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಎಸ್.ಎಂ.ಕೃಷ್ಣ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದಾರೆ. ವಿಧಿ ವಿಧಾನ ಮುಗಿದ ಬಳಿಕ ತಾತನ ಚಿತೆಗೆ ಪ್ರೀತಿಯ ಮೊಮ್ಮಮ ಅಮರ್ತ್ಯ ಅಗ್ನಿ ಸ್ಪರ್ಶ ನೀಡಲಿದ್ದಾರೆ.