ಬೆಂಗಳೂರು : ನಿನ್ನೆ ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು. ಅವರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನುಳಿದ ಮೂವರ ಮೃತದೆಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದೀಗ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ.
ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಇದೀಗ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೈರತಿ ಸುರೇಶ ಸರ್ಕಾರದ ಜೊತೆಗೆ ವೈಯಕ್ತಿಕಗಾಲಿ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಿಬ್ಬಂದಿ ವಜಾ
ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣ ಸಂಬಂಧ ಶಾಲಾ ಪ್ರಾಂಶುಪಾಲೆ ಶಶಿಕಲಾರನ್ನು ಅಮಾನತು ಗೊಳಿಸಲಾಗಿದೆ. ಅಥಿತಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪ ಹಿನ್ನೆಲೆ ಪ್ರಾಂಶುಪಾಲೆಯನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅದೇಶ ಹೊರಡಿಸಿದ್ದಾರೆ.