ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಚಲನಚಿತ್ರ ನಟ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಕೂಡ ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಂದ ಕಲಿಯೋದು ತುಂಬಾ ಇದೆ. ಇಂದಿನ ಯುವ ರಾಜಕಾರಣಿಗಳಿಗೆ ಅವರ ರಾಜಕೀಯ ಜೀವನ ಮಾರ್ಗದರ್ಶನವಾಗಿದೆ.ನಮ್ಮ ದೇಶ ಇಂದು ಒಳ್ಳೆ ನಾಯಕನನ್ನು ನಾವು ಕಳೆದುಕೊಂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಗುರುತಿಸುತ್ತಾರೆಂದರೆ ಅದೆಲ್ಲ ಕ್ರೆಡಿಟ್ ಎಸ್. ಎಂ ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಅಭಿಷೇಕ್ ಅಂಬರೀಶ್ ಅವರು ಸಂತಾಪ ಸೂಚಿಸಿದರು..
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಇನ್ನು ಈಗಾಗಲೇ ರಾಜ್ಯದ ಅನೇಕ ಗಣ್ಯರು ಆಗಮಿಸಿ, ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಎಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರಿಗೆ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಅನೇಕರು ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು.