ಬೆಂಗಳೂರು : ಡ್ರೋನ್ ಪ್ರತಾಪ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.
ವಿಜ್ಞಾನದ ಪ್ರಯೋಗದ ಹೆಸರಿನಲ್ಲಿ ವಿಡಿಯೋವೊಂದನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೀರಿಗೆ ಸೋಡಿಯಮ್ ನೀರಿನಾಳದಲ್ಲಿ ಬ್ಲಾಸ್ಡ್ ಮಾಡಿದ್ದಾರೆ. ಕೆಮಿಕಲ್ ಹಾಕಿದ್ದಾಗ ಬಾಂಬ್ ಬ್ಲಾಸ್ಟ್ ತರ ಸ್ಪೋಟವಾಗಿದೆ. ಈ ವಿಡಿಯೋ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದೆ.
ಪ್ರತಾಪ್ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.