ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಕ್ಕೆ ಖಂಡನೆ ವ್ಯಕ್ತವಾಯಿತು.
ವಿಧಾನ ಪರಿಷತ್ ಕಲಾಪ ಆರಂಭವಾದ ಕೂಡಲೇ ವಿಪಕ್ಷ ಸದಸ್ಯರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಪಂಚಮಸಾಲಿ ಮೀಸಲಾತಿ ಹೋರಾಟ ಮಾಡುವವರ ಮೇಲೆ ಲಾಠಿಚಾರ್ಜ್ ಬೀಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಅಲ್ಲದೆ ಕೂಡಲೇ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಭಮಯಾಚಿಸುವಂತೆ ಒತ್ತಾಯಪಡಿಸಿತು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಪಂಚಮಸಾಲಿ ನಾಯಕರ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿ ಹೋಗೋದಕ್ಕೆ ಆಗಲ್ಲ ಎಂದು ವಿಧಾನ ಪರಿಷತ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಹಿಂದುಳಿದ ವರ್ಗದ ಅಡಿ ಅವಕಾಶ ಪಡೆದುಕೊಳ್ಳಬೇಕಾದರೆ ಸಂವಿಧಾನದ ಪ್ರಕಾರವೇ ಆಗಬೇಕು.ಯಾರೇ ಹಿಂದುಳಿದ ವರ್ಗಕ್ಕೆ ಸೇರಿಸಬೇಕಾದರೆ ಶಾಶ್ವತ ಹಿಂದುಳಿದ ಆಯೋಗದ ವರದಿ ಬೇಕು ಎಂದು ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.