ಬೆಂಗಳೂರು : ಸಂಸದ ರಾಹುಲ್ ಗಾಂಧಿ ಜನನದ ಬಗ್ಗೆ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಹೈಕೋರ್ಟ್ ಯತ್ನಾಳ್ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಹೌದು ಕಳೆದ ಸೆಪ್ಟೆಂಬರ್ 18 ರಂದು ಈ ಕುರಿತು ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಎಸ್ ಮನೋಹರ್ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR ದಾಖಲಿಸಿದ್ದರು. ಇದೀಗ FIR ಅನ್ನು ಹೈಕೋರ್ಟ್ ರದ್ದುಪಡಿಸಿದೆ.
FIR ನಲ್ಲಿ ಏನಿತ್ತು?
ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ಜೊತೆಗೆ ರಾಹುಲ್ ಗಾಂಧಿ ಅವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. ಆದರೂ ಸಹ ಪೊಲೀಸ್ ಇಲಾಖೆ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ವೈಯಕ್ತಿಕವಾಗಿ ರಾಹುಲ್‌ಗಾಂಧಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ.