ಬೆಂಗಳೂರು: ಮುರುಡೇಶ್ವರದಲ್ಲಿ ಸಮುದ್ರಪಾಲಾದ ಘಟನೆಯಿಂದ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ. 2024-25ನೇ ಸಾಲಿನ ಶೈಕ್ಷಣಿಕ ಪ್ರವಾಸವನ್ನು ರದ್ದು ಮಾಡಿದೆ. ಈಗಾಗಲೇ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಲಾಗಿದೆ ಎಂಬ ಸುದ್ದಿ ವೈರಲ್ ಆಗಿತ್ತು. ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯವನ್ನು ಶಾಲಾ ಶಿಕ್ಷಣ ಇಲಾಖೆ ಬಿಚ್ಚಿಟ್ಟಿದೆ. ಆ ಬಗ್ಗೆ ಮುಂದೆ ಓದಿ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕುರಿತಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ಆದೇಶ ಇಲಾಖೆ ಹೊರಡಿಸಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25ನೇ ಸಾಲಿನ ಪ್ರಸ್ತುತದ ಶೈಕ್ಷಣಿಕ ಪ್ರವಾಸ ಮಾಡದಂತೆ, ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ, ನಿರ್ದೇಶನ ನೀಡಿರುವುದಿಲ್ಲ ಎಂದಿದ್ದಾರೆ.
2024-25ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸಗಳನ್ನು ಇಲಾಖೆಯ ಸೂಚನೆ, ನಿರ್ದೇಶನ ಅನುಸರಿಸಿ, ಡಿಸೆಂಬರ್ ಒಳಗೆ ಪೂರ್ಣಗೊಳಿಸುವುದು ಅಂತ ಹೇಳಿದ್ದಾರೆ.
ಇನ್ನೂ ಶೈಕ್ಷಣಿಕ ಪ್ರವಾಸವನ್ನು ವ್ಯವಸ್ಥಿತವಾಗಿ ಕೈಗೊಳ್ಳುವುದು. ಪ್ರವಾಸದ ಸಂದರ್ಭದಲ್ಲಿ ಮಕ್ಕಳನ್ನು ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಂಟಾಗುವ ಯಾವುದೇ ಅವಘಢ, ಹಾನಿಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರಿ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು