ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದು ಮತ್ತು ನಾಳೆ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಧ್ಯ ಮಾರಟಣಿ ಶಶಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶಿಸಿದ್ದಾರೆ.
ಚಿಕ್ಕಮಂಗಳೂರು ಕಡೂರು ಮೂಡಿಗೆರೆ, ಕೊಪ್ಪ ಹಾಗೂ ಎನ್ ಆರ್ ಪುರ ತರೀಕೆರೆ ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಮಧ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ ವಿ ಎಚ್ ಪಿ ಬಜರಂಗದಳ ನೇತೃತ್ವದಲ್ಲಿ ಈ ಒಂದು ದತ್ತ ಜಯಂತಿ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಲಾಗಿದೆ.
ಚಿಕ್ಕಮಂಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ದತ್ತ ಜಯಂತಿ ಅಂಗವಾಗಿ ಇಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ನಾಳೆ ದತ್ತ ಮಾಲಾಧಾರಿಗಳು, ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದರ್ಶನ ಪಡೆಯಲಿದ್ದಾರೆ. ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ.








