ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಹೂವು ಹಿಡಿದುಕೊಂಡು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಹೌದು ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಯಾವಾಗ ಜೈಲಿಗೆ ಹೋದರೋ, ವಿಜಯಲಕ್ಷ್ಮಿ ಸುತ್ತದ ದೇವಸ್ಥಾನಗಳಿಲ್ಲ, ಹಲವು ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿ ನಟ ದರ್ಶನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಕಷ್ಟು ಶ್ರಮಪಟ್ಟಿದ್ದಾರೆ. ಇದೀಗ ಅವರ ಒಂದು ಪೂಜೆ ಫಲ ಎನ್ನುವ ಹಾಗೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಕೈಯಲ್ಲಿ ಹೂವು ಹಿಡಿದುಕೊಂಡು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.