ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ನಟ ದರ್ಶನ್ ಅವರಿಗೆ ಬೇಲ್ ಸಿಕ್ಕರು ಸಂಕಷ್ಟ ತಪ್ಪಿಲ್ಲ. ಏಕೆಂದರೆ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು ಇಂದು ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ ರಾಜ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಚಿಂತನೆ ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.