ಮಂಡ್ಯ :- ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಜ್ಞಾನೇಷ್ (30) ಎಂಬುವವರು ಹೆಬ್ಬೆರಳು ಏತ ನೀರಾವರಿ ಬಳಿ ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ್ಞಾನೇಷ್ ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್ಸ್ಟ್ರಕ್ಷನ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
*ವರದಿ : ಗಿರೀಶ್ ರಾಜ್ ಮಂಡ್ಯ*