ಹುಬ್ಬಳ್ಳಿ : ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಕೋರರಿಗೆ ಹಾಗೂ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದವರಿಗೆ ಕಾಂಗ್ರೆಸ್ ಮತ್ತು ಕೊಡುತ್ತೆ. ಆದರೆ ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಟ ಮಾಡಿದ ನಮಗೆ ಲಾಠಿಚಾರ್ಜ್ ಮಾಡುತ್ತದೆ ಎಂದು ವ್ಯಂಗ್ಯವಾಡಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಠಾಣೆಗೆ ಬೆಂಕಿ ಹಚ್ಚಿದ ವರಿಗೆ ಇವರು ಮುತ್ತು ಕೊಡುತ್ತಾರೆ. ಡಿಜೆ ಹಳ್ಳಿ ಕೇಜಿಹಳ್ಳಿ ಗಲಭೆ ಕೋರರಿಗೆ ಇವರು ಮುತ್ತು ಕೊಡುತ್ತಾರೆ. ಕುಕ್ಕರ್ ಬಾಂಬ್ ಇಟ್ಟವರಿಗೂ ಕಾಂಗ್ರೆಸ್ನವರು ಮತ್ತು ಕೊಡುತ್ತಾರೆ. ಆದರೆ ಶಾಂತಿಯುತ ಹೋರಾಟ ಮಾಡಿದ ನಮಗೆ ಮಾತ್ರ ಲಾಠಿ ಚಾರ್ಜ್ ಮಾಡುತ್ತಾರೆ ಎಂದು ಬೆಲ್ಲದ್ ವ್ಯಂಗ್ಯವಾಡಿದರು.
ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ ನಿಸ್ಸಿಮರು. ಮೀಸಲಾತಿ ಕೊಡುವುದು ಹೇಗೆ ಸಂವಿಧಾನ ವಿರೋಧವಾಗುತ್ತೆ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಶ್ವೇತ ಪತ್ರ ಹೊರಡಿಸಲಿ. ಲಿಂಗಾಯತರು, ಒಕ್ಕಲಿಗರು, ಮರಾಠಿಗರಿಗೆ ಮೀಸಲಾತಿ ಕೊಡಲ್ಲ ಎನ್ನಲಿ ಸಂವಿಧಾನ ವಿರುದ್ಧವಾಗಿ ಮುಸ್ಲಿಮರಿಗೆ ಮೀಸಲಾತಿ ಕೊಡಲಾಗಿದೆ.ಅದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡುವುದಿಲ್ಲ.
ಕಾಂಗ್ರೆಸ್ ಸರ್ಕಾರ ನಮಗೆ ಮೀಸಲಾತಿ ಕೊಡುತ್ತೇವೆ ಎಂಬ ಗ್ಯಾರಂಟಿ ಇಲ್ಲ ಧರ್ಮ ಆಧಾರಿತ ಮೀಸಲಾತಿ ಇಲ್ಲ ಅಂತ ಸಂವಿಧಾನ ಹೇಳಿದೆ ಶೈಕ್ಷಣಿಕ ಮತ್ತು ಸಾಮಾಜಿಕ ಆಧಾರದ ಮೇಲೆ ಮೀಸಲಾತಿ ಇದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿಕೆ ನೀಡಿದರು.