ಕೋಲಾರ : ಸಾಲಗಾರರ ಕಾಟಕ್ಕೆ ಮನನೊಂದ ಮಹಿಳೆಯೊಬ್ಬರು ನಿದ್ದೆ ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಎಂಬಲ್ಲಿ ನಡೆದಿದೆ. ಸಾಲಗಾರರ ಕಾಟ ತಾಳಲಾಗದೆ ಕೋಮಲದೇವಿ ಎನ್ನುವ ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಪುತ್ರಿಯ ವಿದ್ಯಾಭ್ಯಾಸ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದರು. ಸಾಲ ಕೊಟ್ಟಿರುವವರು ಮನೆಯ ಬಳಿ ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನಿದ್ದೆ ಮಾತ್ರ ಸೇವಿಸಿ ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಕೋಮಲ ದೇವಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.