ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕು ಹಲವೆಡೆ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಇಂದು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 15.12.2024 ರ ಭಾನುವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.ಹೀಗಾಗಿ ಈ ಕೆಳಗಿನ ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.
ನಾಳೆ ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ದಿನಾಂಕ 15.12.2024 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-II ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ ಕರೆಂಟ್ ಇರೋದಿಲ್ಲ.ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ.