ಕಲಬುರ್ಗಿ : ಇತ್ತೀಚಿಗೆ ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟು ತಿಂದು, ಕೋಮ ಸ್ಥಿತಿಗೆ ತಲುಪಿದ್ದ ಯುವತಿಯೊಬ್ಬಳು ಸಾವನಪ್ಪಿರುವ ಘಟನೆ ನಿನ್ನೆ ರಾಯಚೂರಿನಲ್ಲಿ ನಡೆದಿತ್ತು. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಬೀದಿ ನಾಯಿಗಳಿಂದ 7ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಹೌದು ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಒಂದೇ ದಿನ ಬೀದಿ ನಾಯಿ ದಾಳಿಯಿಂದ 7ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಬೀದಿ ನಾಯಿಗಳಿಂದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ತಕ್ಷಣ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಹಾಗೂ ಪೋಷಕರು ಇದೀಗ ಆಗ್ರಹಿಸುತ್ತಿದ್ದಾರೆ.