ಮಡಿಕೇರಿ : ಅಳಿಯನೊಬ್ಬ ತನ್ನ ಅತ್ತೆಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಗಲು ಯತ್ನಿಸಿದ್ದಾನೆ. ಈ ವೇಳೆ ಮಾಹಿತಿ ಪಡೆದ ಪೊಲೀಸರು ಸೀನಿಮಿಯ ರೀತಿಯಲ್ಲಿ ಅರೆಸ್ಟ್ ಮಾಡಿರುವ ಘಟನೆ ಮಡಿಕೇರಿ ಜಿಲ್ಲೆಯ ನಾಪೋಕ್ಲು ಸಮೀಪದ ಅಯ್ಯಂಗೆರಿ ಗ್ರಾಮದಲ್ಲಿ ನಡೆದಿದೆ.
ಹೌದು ವೈಯಕ್ತಿಕ ವಿಷಯಕ್ಕೆ ಈ ಒಂದು ಹಲ್ಲೆ ನಡೆದಿದೆ ಎಂದು ಮೆಲ್ನೋಟಲ್ಲೆ ತಿಳಿದುಬಂದಿದೆ.ಹಲ್ಲೆ ನಡೆಸಿದ ಆರೋಪಿಯನ್ನು ಮಡಿಕೇರಿ ನಿವಾಸಿ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಆರೋಪಿ ಅಯ್ಯಂಗೇರಿ ಗ್ರಾಮದಲ್ಲಿದ್ದ ಅತ್ತೆ ಮನೆಗೆ ತೆರಳಿ, ಮನೆಯ ಮುಂಭಾಗದ ಬಾಗಿಲಿನ ಚಿಲಕ ಹಾಕಿ, ಹಿಂಬದಿ ಬಾಗಿಲನ್ನು ಒಡೆದು ಒಳ ನುಗ್ಗಿದ್ದಾನೆ. ಬಳಿಕ ಇಬ್ಬರು ಮಹಿಳೆಯರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ದಾಳಿಯಿಂದ ಆರೋಪಿಯ ಅತ್ತೆ ಐಸಮ್ಮ ಮತ್ತು ಸಂಬಂಧಿ ಕದೀಜ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೃತ್ಯ ಎಸಗಿ ಆರೋಪಿ ಆಟೋದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಮಾಹಿತಿ ತಿಳಿದ ನಾಪೋಕ್ಲು ಪೊಲೀಸರು ಬೆನ್ನಟ್ಟಿ ಹುದ್ದೂರು ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.