ಮೈಸೂರು : ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಯಾತ್ರೆ ನಡೆಯಲಿದೆ ಇದರ ಮಧ್ಯ ಮತ್ತೆ ಜಾಮಿಯಾ ಮಸೀದಿ ವಿವಾದ ಮುನ್ನೆಲೆಗೆ ಬಂದಿದೆ. ಯಾತ್ರೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿಮಯವಾಗಿದ್ದು, ನಿಮಿಷಾಂಬ ದೇಗುಲದ ಬಳಿ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಮಧ್ಯಾಹ್ನ 12ಕ್ಕೆ ಹನುಮ ಸಂಕೀರ್ತನ ಯಾತ್ರೆಗೆ ಚಾಲನೆ ಸಿಗಲಿದೆ.
ಹೌದು ಇದೀಗ ಜಾಮಿಯಾ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶ್ರೀರಂಗಪಟ್ಟಣದಲ್ಲಿ ಸಾವಿರಾರು ಪೊಲೀಸರ ಬಿಗಿ ಭದ್ರತೆಯ ನಡುವೆ ಈ ಒಂದು ಶೋಭಾಯಾತ್ರೆ ನಡೆಯಲಿದೆ. ಹಾಗಾಗಿ ಸಾವಿರಾರು ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ ಯಾವುದೇ ಅಹಿತಕರ ಘಟನೆ ನಡೆದಂತೆ ಭದ್ರತೆ ಒದಗಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾವಿರಾರು ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ.
ಹನುಮ ಸಂಕೀರ್ತನ ಯಾತ್ರೆ ಹಿನ್ನೆಲೆಯಲ್ಲಿ, ಜಾಮಿಯಾ ಮಸೀದಿಗೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ. ಮಸೀದಿಯ ಮುಂಭಾಗವೇ ಈ ಒಂದು ಸಂಕೀರ್ತನ ಯಾತ್ರೆ ಸಾಗಲಿದ್ದು ಯಾವುದೇ ಅಹಿತಕರ ಘಟನೆ ನಡೆಯುದಂತೆ ಜಾಮಿಯಾ ಮಸೀದಿ ಪ್ರವೇಶಕ್ಕೆ ಇದೀಗ ನಿರ್ಬಂಧಿಸಲಾಗಿದೆ. ಬೆಳಿಗ್ಗೆಯಿಂದ ಯಾತ್ರೆ ಮುಗಿಯುವವರೆಗೂ ಅವಕಾಶ ಇಲ್ಲ. ಹಾಗಾಗಿ ಸಾರ್ವಜನಿಕರಿಗೆ ಜಾಮಿಯ ಮಸೀದಿ ಪ್ರವೇಶ ನಿರ್ಬಂಧ ಹೆರಲಾಗಿದೆ.
ಇಂದು ಮದ್ಯ ಮಾರಾಟಕ್ಕೆ ನಿರ್ಬಂಧ
ಹನುಮಾನ್ ಸಂಗೀರ್ತನ ಯಾತ್ರೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿ.ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಈ ಒಂದು ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6 ರಿಂದ ನಾಳೆ ಬೆಳಿಗ್ಗೆ 6ರವರೆಗೆ ಶ್ರೀರಂಗಪಟ್ಟಣ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹನುಮ ಸಂಕೀರ್ತನ ಯಾತ್ರೆ ಹಿನ್ನೆಲೆಯಲ್ಲಿ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.