ಚಿಕ್ಕಮಗಳೂರು : ಟೂರಿಸ್ಟ್ ವಾಹನದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಸಂಪೂರ್ಣವಾಗಿ ವಾಹನಕ್ಕೆ ಬೆಂಕಿ ವ್ಯಾಪಿಸಿದ ಪರಿಣಾಮ, ಪೂರ್ತಿಯಾಗಿ ವಾಹನ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ ಅದೃಷ್ಟವಶಾತ್ ಟೂರಿಸ್ಟ್ ವಾಹನದಲ್ಲಿ ಸಂಚರಿಸುತ್ತಿದ್ದ 11 ಜನರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ.ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ಚಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಕೂಡಲೇ ಅಗ್ನಿಶಾಮಕ ದಳದವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಟೂರಿಸ್ಟ್ ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.ಬಳಿಕ ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.